ಎಸೆಸೆಲ್ಸಿ ಪೂರಕ ಪರೀಕ್ಷೆ: ಪರೀಕ್ಷಾ ಶುಲ್ಕ ಪಾವತಿಗೆ ಆ.28 ಕೊನೆ ದಿನ

Update: 2020-08-26 18:42 GMT

ಬೆಂಗಳೂರು, ಆ.26: ಸೆ. 21ರಿಂದ ಆರಂಭವಾಗಲಿರುವ ಎಸೆಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳು 300 ರೂ.ಗಳ ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಆ.28 ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಅಂತಿಮ ದಿನವನ್ನು ವಿಸ್ತರಿಸಲಾಗಿದೆ. ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರು ಆ.28ರೊಳಗೆ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿ ಬ್ಯಾಂಕಿಗೆ ಪಾವತಿಸಿ, 29ರೊಳಗೆ ಮಂಡಳಿಗೆ ತಲುಪಿಸಬೇಕು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News