ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸದಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ

Update: 2020-08-27 12:32 GMT

ಬೆಂಗಳೂರು, ಆ. 27: ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲಿ, ಬಿತ್ತನೆ ಬೀಜವನ್ನಾಗಲಿ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಯಾವುದೇ ಕಾರಣಕ್ಕೂ ಖರೀದಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಲಹೆ ಮಾಡಿದ್ದಾರೆ.

ಕೆಲವು ಅನಾಮಧೇಯ ಕಂಪೆನಿಗಳು ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾವಹಿಸಿದೆ. ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲಿ, ನಕಲಿ ಜಾಲವನ್ನಾಗಲಿ ತಾವು ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ರೈತರು ಆದಷ್ಟು ಅಧಿಕೃತ ಕಂಪೆನಿಗಳ ಇಲಾಖೆ ರೈತಸಂಪರ್ಕ ಕೇಂದ್ರ ಸೂಚಿಸಿದ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ಔಷಧಿಗಳನ್ನೇ ಖರೀದಿಸಿ ಬಳಸಬೇಕು. ಇಂತಹ ಯಾವುದೇ ಅನಾಮಧೇಯ ಪ್ಯಾಕೆಟ್ ಬಂದಲ್ಲಿ ಅಥವಾ ಯಾರಾದರೂ ನೀಡಿದಲ್ಲಿ ಆ ಬಗ್ಗೆ ರೈತರು ಹಾಗೂ ಜನರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಬಿ.ಸಿ.ಪಾಟೀಲ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News