ಭತ್ತದ ಬೆಳೆ ಸ್ವರ್ಧೆಗೆ ರೈತರಿಂದ ಅರ್ಜಿ ಆಹ್ವಾನ
Update: 2020-08-27 19:52 IST
ಉಡುಪಿ, ಆ.27: ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಭತ್ತದ ಬೆಳೆಯಲ್ಲಿ ರೈತರು ವಿವಿಧ ಹಂತದ ಬೆಳೆ ಸ್ವರ್ಧೆಗೆ ಪ್ರವೇಶ ಶುಲ್ಕವನ್ನು ಪಾವತಿಸಿ ಅರ್ಜಿ, ಭೂ ಮಾಲೀಕತ್ವ ಕ್ಷೇತ್ರ ಕುರಿತ ಕಂದಾಯ ಇಲಾಖೆಯ ದಾಖಲಾತಿ ಅಥವಾ ಗುತ್ತಿಗೆ ಕರಾರು ಪತ್ರಗಳೊಂದಿಗೆ ಸೆ.15ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.