×
Ad

ಪಡಿತರ ಅಕ್ಕಿ ಅಕ್ರಮ ದಾಸ್ತಾನು : ಆರೋಪಿಗಳು ಸಹಿತ 55 ಟನ್ ಅಕ್ಕಿ, ವಾಹನಗಳು ವಶ

Update: 2020-08-27 22:13 IST

ಕುಂದಾಪುರ, ಆ.27: ಉಡುಪಿ ಜಿಲ್ಲೆಯಲ್ಲಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸರಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ  ದಾಸ್ತಾನು ಇರಿಸಿದ್ದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕುಂದಾಪುರ ತಾಲೂಕಿನ ಕೋಟೇಶ್ವರದ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ 55 ಟನ್ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿಸಿಐಬಿ ಪೊಲೀಸ್ ಇನ್ಸ್ ಪೆಕ್ಟರ್ ಮಂಜಪ್ಪ ನೇತೃತ್ವದಲ್ಲಿ ರೈಡ್ ಮಾಡಲಾಗಿದ್ದು, ಕಾರ್ಯಾಚರಣೆಯಲ್ಲಿ 2.75 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿದ್ದ ಮೂರು ಕಾರುಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಇಸ್ಮಾಯಿಲ್, ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಝ್ ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News