×
Ad

ಸ್ಮಶಾನಕ್ಕೆ ಜಾಗ ಮಂಜೂರು ಮಾಡದ ಹಿನ್ನೆಲೆ: ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

Update: 2020-08-27 23:01 IST

ಬೆಂಗಳೂರು, ಆ.27: ರಾಜ್ಯದಲ್ಲಿ ಸಂಸ್ಕಾರಕ್ಕೆ ಸ್ಮಶಾನ ಸ್ಥಳವಿಲ್ಲದ ಕಡೆ ಅಗತ್ಯ ಜಮೀನು ಮಂಜೂರು ಮಾಡುವ ಕುರಿತ ನ್ಯಾಯಾಲಯದ ಆದೇಶ ಪಾಲಿಸದ ಸರಕಾರದ ವಿರುದ್ಧ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಬೆಂಗಳೂರು ನಿವಾಸಿ ಮುಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಿತ್ತು.

ಬಳಿಕ ಇಕ್ಬಾಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಗ್ರಾಮಗಳು ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಆರು ತಿಂಗಳಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು 2019ರ ಆ.20ರಂದು ಆದೇಶ ಮಾಡಿತ್ತು. ಆದರೆ, ಸರಕಾರ ಅವಧಿ ಮುಗಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಕೋರ್ಟ್ ಆದೇಶದ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕು ಎಂದು ಅರ್ಜಿದಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News