ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ರಾಜೀನಾಮೆ ನೀಡುವ ಸಾಧ್ಯತೆ: ವರದಿ
Update: 2020-08-28 11:48 IST
ಟೋಕಿಯೊ, ಆ.28: ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ಮೊದಲು ಆರೋಗ್ಯ ಸಮಸ್ಯೆಯ ಕಾರಣಕ್ಕೆ ರಾಜೀನಾಮೆ ನೀಡುವ ಕುರಿತು ಘೋಷಣೆ ಮಾಡಲಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
ಅಬೆ ಅವರ ಆರೋಗ್ಯ ಕ್ಷೀಣಿಸುತ್ತಿರುವ ಕಾರಣ ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದಾರೆ. ದೇಶವನ್ನು ಮುನ್ನಡೆಸಲು ಅನಾರೋಗ್ಯವು ತೊಂದರೆ ಉಂಟುಮಾಡುವ ಆತಂಕದಲ್ಲಿದ್ದಾರೆ ಎಂದು ರಾಷ್ಟ್ರೀಯ ಪ್ರಸಾರಸಂಸ್ಥೆ ಎನ್‌ಎಚ್‌ಕೆ ತಿಳಿಸಿದೆ.
ಪ್ರಧಾನಮಂತ್ರಿ ಅಬೆ ಅವರ ಆರೋಗ್ಯದ ಕುರಿತ ಊಹಾಪೋಹಗಳು ಕಳೆದ ಕೆಲವು ವಾರಗಳಿಂದ ಕೇಳಿಬರುತ್ತಿದ್ದವು.ಅನಿರ್ದಿಷ್ಟ ವೈದ್ಯಕೀಯ ತಪಾಸಣೆಗಾಗಿ ಅಬೆ ಎರಡು ಬಾರಿ ಆಸ್ಪತ್ರೆಗೆ ತೆರಳಿದ್ದರು. ಅಬೆ ಸಂಜೆ 5 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ. ತನ್ನ ರಾಜೀನಾಮೆಯ ಕುರಿತು ವಿವರಣೆ ನೀಡುವ ಸಾಧ್ಯತೆಯಿದೆ ಎಂದು ಎನ್‌ಎಚ್‌ಕೆ ಸಹಿತ ಹಲವು ಮಾಧ್ಯಮಗಳು ವರದಿ ಮಾಡಿವೆ.