×
Ad

ಕಡಬ: ಕಾರು ಢಿಕ್ಕಿ ; ಬೈಕ್ ಸವಾರರಿಗೆ ಗಂಭೀರ ಗಾಯ

Update: 2020-08-28 15:20 IST

ಕಡಬ, ಆ.28. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ ಐ ಸಮೀಪ ಶುಕ್ರವಾರ ನಡೆದಿದೆ.

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ ಕೊಯಿಲ ಗ್ರಾಮದ ಕಡೆಂಬಿಯಾಲ್ ನಿವಾಸಿಗಳಾದ ಯತೀಶ್(21) ಹಾಗೂ ಶರತ್(19) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News