ಪಿ.ಎ. ಎಂಜಿನಿಯರಿಂಗ್ ಕಾಲೇಜ್ : ಸಿಇಟಿ ಅಭ್ಯರ್ಥಿಗಳಿಗೆ ಉಚಿತ ಆನ್‍ಲೈನ್ ದಾಖಲೆ ಸಲ್ಲಿಕೆಗೆ ಅವಕಾಶ

Update: 2020-08-28 09:52 GMT

ಕೊಣಾಜೆ : ವೃತ್ತಿಪರ ಕೋರ್ಸ್‍ಗಳಾದ ಇಂಜಿನಿಯರಿಂಗ್, ಬಿ.ಫಾರ್ಮ, ಆಯುಷ್, ವೆಟರಿನರಿ ಮುಂತಾದ ಕೋರ್ಸ್‍ಗಳಿಗೆ ಪ್ರವೇಶ ಬಯಸುವ ಸಿ.ಇ.ಟಿ. ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಆನ್‍ಲೈನ್‍ನಲ್ಲಿ ಸಲ್ಲಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿಯಂತೆ ದಾಖಲೆಗಳನ್ನು ಪಿ.ಡಿ.ಎಫ್. ರೂಪದಲ್ಲಿ ಪ್ರಾಧಿಕಾರದ ವೆಬ್‍ಸೈಟ್ ಅಪ್‍ಲೋಡ್ ಮಾಡಬೇಕಿದೆ.

ಕೋವಿಡ್-19 ಹಿನ್ನಲೆಯಲ್ಲಿ ಆನ್‍ಲೈನ್‍ನಲ್ಲೆ ದಾಖಲೆಗಳನ್ನು ಪರಿಶೀಲನೆ ಮಾಡಲಾಗುವುದು. ದಾಖಲೆಗಳನ್ನು ಅಪ್‍ಲೋಡ್ ಮಾಡಲು ನೆಟ್‍ವರ್ಕ್ ಅಥವಾ ಯಾವುದೇ ಇತರೆ ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದಲ್ಲಿ ಆಸಕ್ತ ಅಭ್ಯರ್ಥಿಗಳು ನಮ್ಮ ಸಂಸ್ಥೆ “ಪೇಸ್” ಕಂಪ್ಯೂಟರ್ ಸೆಂಟರ್‍ನಲ್ಲಿ ಬಂದು ಉಚಿತವಾಗಿ ತಮ್ಮ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಿಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ. 9886598946 ಸಂಪರ್ಕಿಸುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News