ಸಿಂದಗಿಯಲ್ಲಿ ದಲಿತ ಯುವಕನ ಹತ್ಯೆ ಮನಷ್ಯರು ತಲೆ ತಗ್ಗಿಸುವಂತಹ ಕೃತ್ಯ: ಸಿದ್ದರಾಮಯ್ಯ
Update: 2020-08-28 18:08 IST
ಬೆಂಗಳೂರು, ಆ.28: ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆಯು ಹೇಯವಾಗಿದ್ದು, ಮನುಷ್ಯರೆಲ್ಲರೂ ತಲೆ ತಗ್ಗಿಸುವಂತಹದ್ದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವವರಿಗೆ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಸಮಾಜದಲ್ಲಿ ಸಿಗುತ್ತಿರುವ ಬೆಂಬಲವೇ ಇಂತಹ ಕೃತ್ಯಗಳು ನಡೆಯುವುದಕ್ಕೆ ಕಾರಣವಾಗುತ್ತವೆ ಎಂದು ಅಭಿಪ್ರಾಯಿಸಿದ್ದಾರೆ.
ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆ ಕುತಂತ್ರಗಳು ಹೆಚ್ಚಾಗುತ್ತಿರುವುದರಿಂದ ದಲಿತ ಮೇಲೆ ಹಲ್ಲೆ, ಹತ್ಯೆಗಳು ಹೆಚ್ಚಾಗುತ್ತಿವೆ. ದಲಿತ ಯುವಕನ ಹತ್ಯೆಯ ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ದಲಿತ ಯುವಕನ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಕ್ಕೆ ಯಾರೇ ಮುಂದಾದರು ಅವರ ಮುಖವಾದ ಬಯಲು ಮಾಡಲು ಬೀದಿಗೆ ಇಳಿಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.