ಬೆಂಗಳೂರು: ನೀಟ್, ಜೆಇಇ ಪರೀಕ್ಷೆ ಮುಂದೂಡಲು ಒತ್ತಾಯಿಸಿ ಧರಣಿ

Update: 2020-08-28 13:12 GMT

ಬೆಂಗಳೂರು, ಆ.28: ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ ಮಾಡುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಎನ್‍ಎಸ್‍ಯುಐ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರು, ಕೇಂದ್ರ ಸರಕಾರವು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕೊರೋನ ಬಿಕ್ಕಟ್ಟಿನ ನಡುವೆ ಜೆಇಇ ಹಾಗೂ ನೀಟ್ ಪರೀಕ್ಷೆ ನಡೆಸುವುದರಿಂದ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುಲು ಸಮಸ್ಯೆ ಆಗುತ್ತೆ. ಜೊತೆಗೆ ಬಡ ಮಕ್ಕಳು ಉಳಿದುಕೊಳ್ಳಲು ಕೂಡ ಆಗುವುದಿಲ್ಲ. ವಿದ್ಯಾರ್ಥಿ ವಿರೋಧಿ ನರೇಂದ್ರ ಮೋದಿ ಸರಕಾರಕ್ಕೆ ಧಿಕ್ಕಾರ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಎನ್‍ಎಸ್‍ಯುಐ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನೀಟ್ ಮತ್ತು ಜೆಇಇ ಪರೀಕ್ಷೆ ಮಾಡುವುದರಿಂದ ವಿದ್ಯಾರ್ಥಿಗಳನ್ನು ಸಾವಿನ ದವಡೆಗೆ ದೂಡಿದಂತಾಗುತ್ತದೆ. ಈ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಬೇಕು. ಕೋವಿಡ್ ದಿನೇ ದಿನೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಷ್ಟ ಆಗುತ್ತೆ. ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚಾಗುತ್ತಿದೆ, ವಿದ್ಯಾರ್ಥಿಗಳು ಕೊರೋನ ಜೊತೆಗೆ ಮನೆಗೆ ಹೋಗಬೇಕಾಗುತ್ತದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News