ಕೋವಿಡ್‍ನಿಂದ ದೇಶ ಸಂಕಷ್ಟದಲ್ಲಿದೆ: ಡಿ.ವಿ.ಸದಾನಂದ ಗೌಡ

Update: 2020-08-28 13:14 GMT

ಬೆಂಗಳೂರು, ಆ.28: ಕೊರೋನ ವೈರಸ್‍ನಿಂದಾಗಿ ದೇಶವು ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಜನತೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕೆಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ನಗರದ ಮಹಾಲಕ್ಷ್ಮಿ ಲೇಔಟ್‍ನ ನಾಗಪುರ ವಾರ್ಡ್‍ನಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಿರುವ ಜಯಚಾಮರಾಜೇಂದ್ರ ಒಡೆಯರ್ ಬ್ಯಾಡ್ಮಿಂಟನ್ ಕೋರ್ಟ್‍ನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಮತ್ತು ಮಾನಸಿಕ ಸದೃಢತೆಗೆ ನಿಯಮಿತವಾದ ವ್ಯಾಯಾಮವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದು ತಿಳಿಸಿದರು.

ಆಹಾರ ಸಚಿವ ಕೆ.ಗೋಪಾಲಯ್ಯ ಮಾತನಾಡಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇನೆ. ಇದಕ್ಕೆ ಕ್ಷೇತ್ರದ ಪಾಲಿಕೆ ಸದಸ್ಯರು ಸೇರಿದಂತೆ ಜನತೆಯ ಸಹಕಾರ ಹೆಚ್ಚಿದೆ ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಉಪಮಹಾಪೌರ ಎಸ್.ಹರೀಶ್, ಎನ್.ಜಯರಾಮ್, ಕೆ.ಬಿ.ವೆಂಕಟೇಶ್ ಮೂರ್ತಿ, ಗಂಗಹನುಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News