×
Ad

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2020-08-28 18:45 IST

ಉಡುಪಿ, ಆ.28: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲಾಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಸಮಾಜ ಸೇವೆ ಇತ್ಯಾದಿಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಆರು ವೈಯಕ್ತಿಕ ಪ್ರಶಸ್ತಿ ಹಾಗೂ ಒಂದು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ದ್ವಿಪ್ರತಿಯೊಂದಿಗೆ ಸೆಪ್ಟೆಂಬರ್ 7ರೊಳಗೆ ಸಲ್ಲಿಸಬಹುದು. ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆಯುವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವುದು.

 ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ತಳಅಂತಸ್ತು, ಕೊಠಡಿ ಸಂಖ್ಯೆ 4,5, ರಜತ್ರಾದಿ, ಮಣಿಪಾಲ, ಉಡುಪಿ. ದೂರವಾಣಿ ಸಂಖ್ಯೆ 0820-2574810/811ನ್ನು ಸಂರ್ಪಕಿಸಬಹುದು ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News