‘10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರು’ ಎಂಬ ಅರ್ಜಿಗೆ ಉತ್ತರಿಸುವಂತೆ ಕೇಂದ್ರಕ್ಕೆ ಸುಪ್ರೀಂ ನೋಟಿಸ್

Update: 2020-08-28 13:43 GMT

ಹೊಸದಿಲ್ಲಿ, ಆ.28: 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿರುವುದರಿಂದ, ರಾಜ್ಯಗಳಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿ ರೂಪಿಸುವಂತೆ ಕೋರಿದ್ದ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.

10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದರೂ ಇದನ್ನು ಘೋಷಿಸಿಲ್ಲ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದರು. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗದ ಕಾಯ್ದೆ 2004ರ ಸೆಕ್ಷನ್ 2(ಎಫ್)ನ ಸಿಂಧುತ್ವವೂ ಪ್ರಶ್ನಾರ್ಹವಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಮುಖಂಡ ಮತ್ತು ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಧೀಶ ಎಸ್‌ಕೆ ಕೌಲ್ ನೇತೃತ್ವದ ನ್ಯಾಯಪೀಠ ಗೃಹ ಇಲಾಖೆ, ಕಾನೂನು ಮತ್ತು ನ್ಯಾಯ ಇಲಾಖೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆಗೆ ನೋಟಿಸ್ ಜಾರಿಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News