×
Ad

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2020-08-28 19:44 IST

ಉಡುಪಿ, ಆ.28: ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸ್ತುತ ಸಾಲಿನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

2019-20ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ/ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್/ಮೆಡಿಕಲ್‌ನಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.s.w.kar.nic.in- ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು, ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಜಿಲ್ಲಾ ಸಂಕೀರ್ಣ ಎರಡನೇ ಮಹಡಿ ಬಿ ಬ್ಲಾಕ್ ರಜತಾದ್ರಿ ಮಣಿಪಾಲ (ದೂರವಾಣಿ ಸಂಖ್ಯೆ: 0820-2574814, 0820-2950198) ಇವರನ್ನು ಸಂಪರ್ಕಿಸಬಹುು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News