ಡಿಕೆಶಿ ವಿರುದ್ಧ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

Update: 2020-08-28 14:32 GMT

ಹೊಸದಿಲ್ಲಿ, ಆ.28: ಆದಾಯ ತೆರಿಗೆ ಇಲಾಖೆ ತಮ್ಮ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಮುಂದಾಗಿರುವುದಕ್ಕೆ ತಡೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಈ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾ.ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯಂ ಅವರನ್ನೊಳಗೊಂಡ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆ ತಮ್ಮ ಪ್ರತಿಕ್ರಿಯೆಯನ್ನು 2 ವಾರದೊಳಗೆ ಸಲ್ಲಿಸಬೇಕೆಂದು ಸೂಚಿಸಿತು.

ಈ ಪ್ರತಿಕ್ರಿಯೆ ಬಂದ ಬಳಿಕ ಅದಕ್ಕೆ ಮರುಪ್ರತಿಕ್ರಿಯೆ ನೀಡಲು ಅರ್ಜಿದಾರರಾದ ಡಿಕೆಶಿಗೆ ಒಂದು ವಾರ ಕಾಲಾವಕಾಶ ನೀಡಿದೆ. ಭಾರೀ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಕ್ರಿಮಿನಲ್ ವಿಚಾರಣೆಗೆ ಮುಂದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News