×
Ad

ಸುರಕ್ಷಿತ ಅಂತರ ಹಿನ್ನೆಲೆ : ರಿಕ್ರಿಯೇಶನ್ ಕ್ಲಬ್‌ಗಳ ಬಂದ್‌ಗೆ ಆದೇಶ

Update: 2020-08-28 22:13 IST

ಮಂಗಳೂರು, ಆ. 28: ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯ ರಿಕ್ರಿಯೇಶನ್ ಕ್ಲಬ್‌ಗಳಲ್ಲಿ ಸುರಕ್ಷಿತ ಅಂತರ ಪಾಲನೆಯಾಗುತ್ತಿಲ್ಲ ಎಂಬ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಯ ವರದಿಯ ಆಧಾರದ ಮೇಲೆ ಮುಂದಿನ ಸೂಚನೆಯವರೆಗೆ ಎಲ್ಲಾ ರಿಕ್ರಿಯೇಶನ್ ಕ್ಲಬ್‌ಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

ಬಂಟ್ವಾಳ, ಬಿ.ಸಿ.ರೋಡ್, ಮೆಲ್ಕಾರ್, ಸಿದ್ಧಕಟ್ಟೆ, ಉಜಿರೆ, ಬೆಳ್ತಂಗಡಿ, ವೇಣೂರು, ಮಡಂತ್ಯಾರು, ಪುತ್ತೂರು, ನೆಲ್ಯಾಡಿಯ ರಿಕ್ರಿಯೇಶನ್ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಈ ಕ್ಲಬ್‌ಗಳಲ್ಲಿ ಇಸ್ಪೀಟ್ ಕಾಡ್ಗರ್ಳನ್ನು ಬಳಸಿ ಆಟವಾಡಲಾಗುತ್ತಿದೆ. ಅವಾಗ ಸುರಕ್ಷಿತ ಅಂತರವಿರುವುದಿಲ್ಲ. ಅಲ್ಲದೆ ಕಾರ್ಡ್‌ಗಳ ಮೂಲಕ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News