×
Ad

ಮಂಗಳೂರು ವಿಶ್ವವಿದ್ಯಾನಿಲಯದ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ

Update: 2020-08-31 12:08 IST

ಮಂಗಳೂರು, ಆ.31: ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾದ ಸಮಾಲೋಚನಾ ಕಾರ್ಯಕ್ರಮಕ್ಕೆ ಎಬಿವಿಪಿ ಸಂಘಟನೆಯೊಂದಕ್ಕೆ ಮಾತ್ರವೇ ಆಹ್ವಾನ ನೀಡಿ ಇತರ ವಿದ್ಯಾರ್ಥಿ ಸಂಘಟನೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ದ.ಕ. ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಮಂಗಳೂರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಎದುರು ಎನ್‌ಎಸ್‌ಯುಐನ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ವಿರುದ್ಧ ಘೋಷಣೆ ಕೂಗಿದರು.

ಮಂಗಳೂರು ವಿವಿಯ ಕುಲಪತಿ ಎಬಿವಿಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಆರೋಪಿಸಿದರು.

ಸಂಸತ್ತಿನಲ್ಲಿ ಚರ್ಚಿಸದೆ, ರಾಜ್ಯ ಸರಕಾರದ ಜತೆ ಸಮಾಲೋಚನೆ ನಡೆಸದೆ, ದೇಶದಲ್ಲಿ ದೇಶದಲ್ಲಿ ಹಲವಾರು ವಿದ್ಯಾರ್ಥಿ ಸಂಘಟನೆಗಳಿದ್ದರೂ ಅವುಗಳ ಜತೆ ಚರ್ಚಿಸದೆ ಕೇಂದ್ರ ಸರಕಾರವು ಏಕಾಏಕಿಯಾಗಿ ಹೊಸ ಶಿಕ್ಷಣ ನೀತಿಗೆ ಮುಂದಾಗಿದೆ. ಇದು ಶಿಕ್ಷಣ ಈ ಬಗ್ಗೆ ಚರ್ಚಿಸದೆ, ಏಕಾಏಕಿಯಾಗಿ ಶಿಕ್ಷಣನ್ನು ಕೇಸರೀಕರಣಗೊಳಿಸುವ ಹುನ್ನಾರಕ್ಕೆ ಕೇಂದ್ರ ಮುಂದಾಗಿದೆ. ಇದು ಶಿಕ್ಷಣದ ಕೇಸರೀಕರಣದ ಹುನ್ನಾರ ಎಂದು ಆರೋಪಿಸಿದರು.

ಎನ್.ಎಸ್.ಯು.ಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಾಯಬೆ, ಜಿಲ್ಲಾ ಉಪಾಧ್ಯಕ್ಷ ಶೌವಾದ್ ಗೂನಡ್ಕ ಮಾತನಾಡಿ, ವಿಶ್ವ ವಿದ್ಯಾನಿಲಯದ ಕುಲಪತಿಗಳು ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುವ ಮೂಲಕ ಎಬಿವಿಪಿಯವರೊಂದಿಗೆ ಸೇರಿ ನೂತನ ಶಿಕ್ಷಣ ನೀತಿಯ ಕುರಿತ ಕಾರ್ಯಕ್ರಮವನ್ನು ಆಯೋಜಿಸಿರುವುದು ಸರಿಯಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಎನ್.ಎಸ್.ಯು.ಐ ಅಧ್ಯಕ್ಷ ಶೌನಕ್ ರೈ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೌಹಾಸ್, ಶೇಖ್ ಅಫ್ಸಾನ್, ಎನ್.ಎಸ್.ಯು.ಐ ಆರ್‌ಟಿಐ ಸೆಲ್ ಕೋರ್ಡಿನೇಟರ್ ಅನ್ವಿತ್ ಕಟೀಲ್, ಎನ್.ಎಸ್.ಯು.ಐ ಜಿಲ್ಲಾ ಕಾರ್ಯದರ್ಶಿ ಬಾತೀಶ್ ಅಳಕೆಮಜಲು, ಎನ್.ಎಸ್.ಯು.ಐ  ಪುತ್ತೂರು ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಝೈನ್ ಆತೂರು, ಎನ್.ಎಸ್.ಯು.ಐ ಸುಳ್ಯ ಉಪಾಧ್ಯಕ್ಷ ಆಶಿಕ್ ಆರಂತೋಡು, ಎನ್.ಎಸ್.ಯು.ಐ ಬಂಟ್ವಾಳ ಅಧ್ಯಕ್ಷ ವಿನಯ್ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News