ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ

Update: 2020-08-31 11:57 GMT

ಬೆಂಗಳೂರು, ಆ.31: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗಾಳಿಯು 30-40 ಕಿ.ಮೀವೇಗದಲ್ಲಿ ಬೀಸುತ್ತದೆ. ಬೆಂಗಳೂರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದ್ದು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ ಭಾರೀ ಮಳೆ ಸಾಧ್ಯತೆಯಿದೆ. ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಕೂಡ ಸೆ.1 ರಿಂದ 3ರವರೆಗೆ ಯೆಲ್ಲೋ ಅಲರ್ಟ್ ಘೊಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆ.30ರ ರವಿವಾರದಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಶಿರಾಡಿ, ಕುಮಟಾ, ಅಂಕೋಲಾ ತಲಾ ಎಂಟು ಸೆಂ.ಮೀ ಮಳೆಯಾಗಿದ್ದು, ಗೋಕರ್ಣ, ಕದ್ರಿಯಲ್ಲಿ ತಲಾ ಏಳು ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಲೆನಾಡು ಭಾಗದಲ್ಲೂ ಮಳೆಯ ಅಬ್ಬರ ಮುಂದುವರಿಯುಲಿದೆ. ಹೀಗಾಗಿ, ಈ ಭಾಗದಲ್ಲೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸೆ.1 ಮತ್ತು 2ರಂದು ವ್ಯಾಪಕ ಮಳೆ ನಿರೀಕ್ಷೆಯಿದೆ. ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಭಾಗದ ನದಿ ಅಂಚಿನ ಗ್ರಾಮದ ಜನರು ಕೊಂಚ ಎಚ್ಚರಿಕೆಯಿಂದ ಇರುವಂತೆ ಅವರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News