×
Ad

Breaking News: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನ

Update: 2020-08-31 18:01 IST

ಹೊಸದಿಲ್ಲಿ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ (84) ಇಂದು ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಣವ್ ಮುಖರ್ಜಿಯವರನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ದಿನೇ ದಿನೇ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ಅವರು ಕೋಮಾಕ್ಕೆ ಜಾರಿದ್ದಾರೆ ಎಂದು ಆಸ್ಪತ್ರೆ ತಿಳಿಸಿತ್ತು.

“ಆರ್ ಆರ್ ಆಸ್ಪತ್ರೆಯ ವೈದ್ಯರ ಪ್ರಯತ್ನದ ನಂತರವೂ ನನ್ನ ತಂದೆ ಪ್ರಣವ್ ಮುಖರ್ಜಿ ನಿಧನರಾಗಿದ್ದಾರೆ ಎಂದು  ಭಾರವಾದ ಹೃದಯದೊಂದಿಗೆ ನಿಮಗೆ ತಿಳಿಸುತ್ತಿದ್ದೇನೆ” ಎಂದು ಪ್ರಣವ್ ಮುಖರ್ಜಿಯವರ ಪುತ್ರ ಅಭಿಜಿತ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.

ಕೋಮಾ ಸ್ಥಿತಿಯಲ್ಲಿರುವ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಸೇನಾ ಆಸ್ಪತ್ರೆ ಮಾಹಿತಿ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News