ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2020-08-31 12:43 GMT

ಬೆಂಗಳೂರು, ಆ.31: ರಾಜ್ಯ ಸರಕಾರವು ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪಿ.ರವಿಕುಮಾರ್ ಅವರನ್ನು ಸರಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿಯವರನ್ನು ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಪ್ರಸ್ತುತ ಅವರು ನಿರ್ವಹಿಸುತ್ತಿರುವ ಜವಾಬ್ದಾರಿಯನ್ನು ಮುಂದುವರಿಸಲಾಗಿದೆ.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ, ಜೊತೆಗೆ, ಪ್ರಸ್ತುತ ಅವರು ನಿರ್ವಹಿಸುತ್ತಿರುವ ಜವಾಬ್ದಾರಿಯನ್ನು ಮುಂದುವರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News