ಪ್ರಣವ್ ಮುಖರ್ಜಿ ನಿಧನ: 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Update: 2020-08-31 20:07 IST
ಹೊಸದಿಲ್ಲಿ, ಆ.31: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ದೇಶದಾದ್ಯಂತ ಆ.31 ರಿಂದ ಸೆ.6ರವರೆಗೆ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಿದೆ.
ಶೋಕಾಚರಣೆ ಅವಧಿಯಲ್ಲಿ ಎಲ್ಲ ಸರಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು. ಪ್ರಣವ್ ಮುಖರ್ಜಿ ಅವರ ಅಂತ್ಯಕ್ರಿಯೆಯ ದಿನಾಂಕ, ಸಮಯ ಹಾಗೂ ಸ್ಥಳವನ್ನು ನಂತರ ಪ್ರಕಟಿಸಲಾಗುವುದು ಎಂದು ಕೇಂದ್ರ ಸರಕಾರದ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನುಜ್ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.