×
Ad

ಮಂಗಳೂರು: ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Update: 2020-08-31 20:20 IST

ಮಂಗಳೂರು, ಆ. 31: ಅತಿಥಿ ಶಿಕ್ಷಕರಿಗೆ ಕೋವಿಡ್ 19 ಪ್ಯಾಕೇಜ್, ಉದ್ಯೋಗ ಭದ್ರತೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅತಿಥಿ ಶಿಕ್ಷಕರ ಹೋರಾಟ ಸಮಿತಿ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಪ್ರತಿಭಟನೆ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಸೋಮವಾರ ನಡೆಯಿತು.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಚಿತ್ರಲೇಖಾ ಕೆ. ಅವರು ಮಾತನಾಡಿ, ಅತಿಥಿ ಶಿಕ್ಷಕರಿಗೆ ರಾಜ್ಯ ಸರಕಾರವು ವಿಶೇಷ ಪ್ಯಾಕೇಜ್ ಘೋಷಿಸಬೇಕು. ಮುಂಬರುವ ಎಲ್ಲಾ ನೇಮಕಾತಿಗಳಲ್ಲಿ ಅತಿಥಿ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಿ ಅತಿಥಿ ಶಿಕ್ಷಕರನ್ನು ನಿರ್ದಿಷ್ಟ ಸಂಖ್ಯೆಯಲ್ಲಿ ಖಾಯಂ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳ ಬೇಕು. ಜತೆಗೆ ಸರಕಾರವು ಅತಿಥಿ ಶಿಕ್ಷಕರ ಸಂಬಳವನ್ನು ಹೆಚ್ಚಿಸಬೇಕು, ವರ್ಷದ 12 ತಿಂಗಳು ಕೂಡ ಸಂಬಳ ನೀಡಬೇಕು ಹಾಗೂ ಇದು ಪ್ರತೀ ತಿಂಗಳ ಮೊದಲ ವಾರದಲ್ಲಿಯೇ ಅತಿಥಿ ಶಿಕ್ಷಕರಿಗೆ ತಲುಪಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಅತಿಥಿ ಶಿಕ್ಷಕರಿಗೆ ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ನೀಡಬೇಕು. ಮಾನವೀಯ ಹಾಗೂ ನೈತಿಕವಾಗಿಯೂ ಅತಿಥಿ ಶಿಕ್ಷಕರ ಹಿತ ಕಾಪಾಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದು ಪ್ರತಿಭಟನಾನಿರತರು ಸರಕಾರವನ್ನು ಆಗ್ರಹಿಸಿದರು.

ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ದ.ಕ. ಜಿಲ್ಲಾ ಅಧ್ಯಕ್ಷರಾದ ಚಂದ್ರಿಕಾ, ಪ್ರಮುಖರಾದ ಕಾವ್ಯ, ದಯಾಮಣಿ, ಬಬಿತಾ, ಜಯಮಾಲ, ಜಯಶ್ರೀ, ಯತಿಶ್.ಕೆ, ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News