×
Ad

ಅಜ್ಜಿನಡ್ಕ ಎಸ್‌ಡಿಪಿಐ: ಆಯುಷ್ಮಾನ್ ಕಾರ್ಡ್ ನೋಂದಣಿ

Update: 2020-08-31 21:07 IST

ಮಂಗಳೂರು, ಆ.31: ಎಸ್‌ಡಿಪಿಐ ಅಜ್ಜಿನಡ್ಕ ವತಿಯಿಂದ ಉಚಿತ ಅಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನವು ಸೋಮವಾರ ಅಜ್ಜಿನಡ್ಕ ಮುಳ್ಳುಗುಡ್ಡೆಯ ಅಲ್ ಹಿದಾಯ ಜುಮಾ ಮಸ್ಜಿದ್ ಹಿದಾಯತ್ ನಗರದಲ್ಲಿ ನಡೆಯಿತು.

ಎಸ್‌ಡಿಪಿಐ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮಂಚಿ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯ ನಾಸಿರ್ ಒಮೆರಾ, ಎಸ್‌ಡಿಟಿಯು ಮಂಗಳೂರು ಕ್ಷೇತ್ರ ಅಧ್ಯಕ್ಷ ಇರ್ಶಾದ್ ಅಜ್ಜಿನಡ್ಕ, ಉಪಾಧ್ಯಕ್ಷ ಇಸ್ಮಾಯಿಲ್ ತಲಪಾಡಿ ಭಾಗವಹಿಸಿದ್ದರು.

ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ದ.ಕ. ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್, ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಬ್ಬಾಸ್ ಕಿನ್ಯ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಕೋಡಿಜಾಲ್ ಭೇಟಿ ನೀಡಿ ಶುಭ ಹಾರೈಸಿದರು.

ಎಸ್‌ಡಿಟಿಯು ಮಂಗಳೂರು ಕ್ಷೇತ್ರ ಕಾರ್ಯದರ್ಶಿ ಮೊಯಿದಿನ್ ಎಸ್‌ಬಿ ಅಜ್ಜಿನಡ್ಕ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News