×
Ad

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

Update: 2020-08-31 21:18 IST

ಮಂಗಳೂರು, ಆ.31: ಕಳೆದ ಸಾಲಿನ (2019-20) ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಸೆಸೆಲ್ಸಿ ಮತ್ತು ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಉತ್ತಿರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7 ಸಾವಿರ ರೂ., ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಮತ್ತು ವಿವಿ ಮಟ್ಟದಲ್ಲಿ ಸ್ನಾತಕೋತ್ತರ ಪದವಿ ಯಲ್ಲಿ 1 ರಿಂದ 5 ನೇ ರ್ಯಾಂಕ್ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 50 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಇಲಾಖೆಯ ಡಿಡಿಡಿ.ಡಿ.ಚ್ಟ.್ಞಜ್ಚಿ.ಜ್ಞಿ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ದೃಢೀಕೃತ ದಾಖಲೆಗಳೊಂದಿಗೆ ಬೆಂಗಳೂರಿನ ಕೇಂದ್ರ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಿದ ನಂತರ ಅದರ ದೃಢೀಕೃತ ಪ್ರತಿಯನ್ನು ದಾಖಲೆಗಳ ಸಮೇತ ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆ ದಿನವಾಗಿದೆ.

ಮಾಹಿತಿಗಾಗಿ ಮಂಗಳೂರು ಸಮಾಜ ಕಲ್ಯಾಣ ಇಲಾಖೆಯ ದೂ.ಸಂ: 0824-2451237ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News