ಕೋವಿಡ್-19 ಕೆಲ ನಿರ್ಬಂಧಗಳು ಸಡಿಲು: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಆ.31:ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿಬಂಧನೆಗಳನ್ನು ಹೇರುವುದು ಮತ್ತು ಕಂಟೈನ್‌ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬಂದಿದ್ದು, ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಸೆಪ್ಟಂಬರ್ 1ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಕೆಲವು ನಿಬಂಧನೆಗಳನ್ನು ವಿಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಸೆ.30ರ ವರೆಗೆ ಇರುತ್ತದೆ. ವೈದ್ಯಕೀಯ ತುರ್ತುಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾ ಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯ ಒಳಗೆ ಹಾಗೂ ಹೊರಗೆ ಜನರ ಲನವಲನಗಳನ್ನು ನಿಷೇಧಿಸಲಾಗಿದೆ.
ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಸೆ.30ರ ವರೆಗೆ ಇರುತ್ತದೆ. ವೈದ್ಯಕೀಯ ತುರ್ತುಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾ ಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯ ಒಳಗೆ ಹಾಗೂ ಹೊರಗೆ ಜನರ ಚಲನವಲನಗಳನ್ನು ನಿಷೇಧಿಸಲಾಗಿದೆ.
ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಶಾಲೆಗಳು, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸೆ.30ರವರೆಗೆ ವಿದ್ಯಾರ್ಥಿಗಳು ಮತ್ತು ನಿಯಮಿತ ತರಗತಿ ಚಟುವಟಿಕೆಗಳಿಗೆ ಮುಚ್ಚಿರುವುದು ಮುಂದುವರಿಯಲಿದೆ. ಆದರೆ ಆನ್‌ಲೈನ್/ದೂರಶಿಕ್ಷಣ ಕಲಿಕೆಗಳಿಗೆ ಅನುಮತಿ ಮುಂದುವರಿಯಲಿದೆ. ಸೆ.20ರಿಂದ ಜಾರಿಗೆ ಬರುವಂತೆ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ ಆನ್‌ಲೈನ್ ಬೋಧನೆ/ಟೆಲಿ ಸಮಾಲೋಚನೆ ಹಾಗೂ ತತ್ಸಂಬಂಧಿತ ಕಾರ್ಯಕ್ಕಾಗಿ ಒಮ್ಮೆಗೆ ಶಾಲೆಗಳಿಗೆ ಶೇ. 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕರೆಯಬಹುದು.
ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳು, ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಅಥವಾ ರಾಜ್ಯ ಕೌಶಲ್ಯ ಅಭಿವೃದ್ಧಿ ಮಿಷನ್‌ನಲ್ಲಿ ನೋಂದಾಯಿಸಿಕೊಂಡ ಅಲ್ಪಾವಧಿ ತರಬೇತಿ ಕೇಂದ್ರ ಗಳಲ್ಲಿ ಕೌಶಲ್ಯ ಅಥವಾ ಉದ್ಯಮಶೀಲತೆ ತರಬೇತಿಯನ್ನು ಪಡೆಯುವುದಕ್ಕೆ ಸೆ.21ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುವುದು.
ಸರಕಾರದ ಎಲ್ಲಾ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.