ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ರದ್ದತಿ ಸೆ.30 ರವರೆಗೆ ವಿಸ್ತರಣೆ

Update: 2020-08-31 19:35 GMT

ಹೊಸದಿಲ್ಲಿ,ಆ.31: ಕೊರೋನ ಸೋಂಕಿನ ಹಾವಳಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟ ಅಮಾನತುಗೊಳಿಸಿರುವುದನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಾಯುಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸೋಮವಾರ ತಿಳಿಸಿದೆ.

‘‘ಆದಾಗ್ಯೂ, ಆಯ್ದ ವಾಯುಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಪರಾಮರ್ಶೆಯ ಆಧಾರ (ಕೇಸ್ ಟು ಕೇಸ್ ಬೇಸಿಸ್) ದಲ್ಲಿ ಅನುಮತಿ ನೀಡಲಾಗುವುದು ಎಂದು ಹೇಳಿದೆ.

ಕೊರೋನ ವೈರಸ್ ಸೋಂಕಿನ ಹಾವಳಿಯ ಹಿನ್ನೆಲೆಯಲ್ಲಿ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ಮಾರ್ಚ್ 23ರಿಂದ ರದ್ದುಪಡಿಸಲಾಗಿದೆ.

ಆದಾಗ್ಯೂ, ಅಂತಾರಾಷ್ಟ್ರೀಯ ಸರಕು ಸಾಗಣೆಗಳಿಗೆ ಹಾಗೂ ಡಿಜಿಸಿಎನಿಂದ ವಿಶೇಷ ಅನುಮೋದನೆ ಪಡೆದಿರುವ ವಿಮಾನಗಳ ಹಾರಾಟಕ್ಕೆ ಈ ಅದೇಶವು ಯಾವುದೇ ಪರಿಣಾಮ ಬೀರುವುದಿಲ್ಲವೆಂದು ಡಿಜಿಸಿಎ ಸುತ್ತೋಲೆ ಸ್ಪಷ್ಟಪಡಿಸಿದೆ.

ಈ ಮಧ್ಯೆ, ಮೇ ತಿಂಗಳಿನಿಂದ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಶನ್‌ನಡಿ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯಾಚರಿಸುತ್ತಿವೆ. ಅದೇ ರೀತಿ ವಿವಿಧ ದೇಶಗಳ ಜೊತೆ ಏರ್ಪಡಿಸಿಕೊಂಡಿರುವ ದ್ವಿಪಕ್ಷೀಯ ಒಪ್ಪಂದದಡಿಯಲ್ಲಿಯೂ ವಿಮಾನಗಳು ಹಾರಾಟ ನಡೆಸುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News