ಸಚಿವೆ ಶಶಿಕಲಾ ಜೊಲ್ಲೆಗೆ ಕೊರೋನ ಸೋಂಕು ದೃಢ

Update: 2020-08-31 18:10 GMT
Photo: Twitter

ಬೆಂಗಳೂರು, ಆ.31: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News