ದಿಲ್ಲಿ ಹಿಂಸಾಚಾರ ಪ್ರಕರಣ: ದೇವಾಂಗನಾ ಕಲಿಟಾಗೆ ಜಾಮೀನು ನೀಡಿದ ದಿಲ್ಲಿ ಹೈಕೋರ್ಟ್

Update: 2020-09-01 13:47 GMT

ಹೊಸದಿಲ್ಲಿ, ಸೆ.1: ಕಳೆದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭದ ಹಿಂಸಾಚಾರಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ‘ಪಿಂಜ್ರಾ ತೋಡ್’ ಮಹಿಳಾ ಸಂಘಟನೆಯ ಸದಸ್ಯೆ ಹಾಗೂ ಜೆಎನ್‌ಯು ವಿದ್ಯಾರ್ಥಿನಿ ದೇವಾಂಗನಾ ಕಲಿಟಾ ಅವರಿಗೆ ದಿಲ್ಲಿ ಉಚ್ಚ ನ್ಯಾಯಾಲಯವು ಮಂಗಳವಾರ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದೆ.

ನ್ಯಾ.ಸುರೇಶ್ ಕುಮಾರ್ ಕೈಟ್ ಅವರು 25,000 ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತೆಯ ಆಧಾರದಲ್ಲಿ ಕಲಿಟಾ ಅವರಿಗೆ ಜಾಮೀನು ನೀಡಿದರು.

 ನೇರವಾಗಿ ಅಥವಾ ಪರೋಕ್ಷವಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಸಾಕ್ಷ್ಯಗಳನ್ನು ತಿರುಚದಂತೆ ನ್ಯಾಯಾಲಯವು ಕಲಿತಾರಿಗೆ ನಿರ್ದೇಶ ನೀಡಿದೆ.

ಕಲಿತಾ ಮತ್ತು ‘ಪಿಂಜ್ರಾ ತೋಡ್’ನ ಇನ್ನೋರ್ವ ಸದಸ್ಯೆ ನತಾಶಾ ನರ್ವಾಲ್ ಅವರನ್ನು ಕಳೆದ ಮೇ ತಿಂಗಳಿನಲ್ಲಿ ಬಂಧಿಸಿದ್ದ ದಿಲ್ಲಿ ಪೊಲೀಸರು ಅವರ ವಿರುದ್ಧ ದಂಗೆ, ಅಕ್ರಮ ಕೂಟ ಮತ್ತು ಕೊಲೆಯತ್ನ ಸೇರಿದಂತೆ ಐಪಿಸಿಯ ವಿವಿಧ ಕಲಮ್‌ಗಳಡಿ ಪ್ರಕರಣವನ್ನು ದಾಖಲಿಸಿದ್ದರು.

ಈಶಾನ್ಯ ದಿಲ್ಲಿ ಹಿಂಸಾಚಾರ ಮತ್ತು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭ ಹಳೆಯ ದಿಲ್ಲಿಯ ದರಿಯಾಗಂಜ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ಕಲಿತಾ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ಅವರು ಜಾಮೀನು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News