ಸಚಿವ ಕೆ.ಎಸ್.ಈಶ್ವರಪ್ಪರಿಗೆ ಕೊರೋನ ಸೋಂಕು ದೃಢ

Update: 2020-09-01 13:14 GMT

ಬೆಂಗಳೂರು, ಸೆ.1: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನನಗೆ ಇಂದು ಕೊರೋನ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ‘ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ’ ಎಂದು ಇದೇ ಸಂದರ್ಭದಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

‘ಜನಪ್ರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಮತ್ತು ನನ್ನ ಆತ್ಮೀಯರಾದ ಕೆ.ಎಸ್.ಈಶ್ವರಪ್ಪನವರು ಅತಿ ಶೀಘ್ರದಲ್ಲಿ ಕೊರೋನ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಮತ್ತೆ ತಮ್ಮ ಎಂದಿನ ಕೆಲಸ-ಕಾರ್ಯಗಳಲ್ಲಿ ತೊಡಗಿಕೊಳ್ಳಲಿ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾರೈಸಿದ್ದಾರೆ.

‘ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೋನ ಸೋಂಕು ದೃಢಪಟ್ಟಿರುವ ವಿಷಯ ತಿಳಿದು ಬೇಸರವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಲಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News