ಕರ್ನಾಟಕ ಲೋಕಸೇವಾ ಆಯೋಗ ಪರಿಷ್ಕೃತ ಕೀ ಉತ್ತರ ಪ್ರಕಟ

Update: 2020-09-01 15:37 GMT

ಬೆಂಗಳೂರು, ಸೆ.1: ಕರ್ನಾಟಕ ಲೋಕ ಸೇವಾ ಆಯೋಗವು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಗ್ರೂಪ್ ‘ಎ’ ವೃಂದದ ಒಟ್ಟು 54 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆ.17 ರಂದು ನಡೆಸಿದ್ದು, ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಆ.20 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿದ್ದ ಆಕ್ಷೇಪಣೆಗಳ್ನು ಪರಿಶೀಲಿಸಿ, ಪರಿಷ್ಕೃತ ಕೀ ಉತ್ತರಗಳನ್ನು ಆಯೋಗದ ವೆಬೆಸೈಟ್ http://kpsc.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News