‘ಡ್ರಗ್ಸ್' ಬಗ್ಗೆ ಯುವ ಜನಾಂಗದಲ್ಲಿ ಜಾಗೃತಿ ಮೂಡಿಸಲು ನಳಿನ್ ಕುಮಾರ್ ಕಟೀಲು ಕರೆ

Update: 2020-09-01 15:50 GMT

ಬೆಂಗಳೂರು, ಸೆ.1: ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ ದೇಶವನ್ನು ಕೂಡ ದುರ್ಬಲ ಮಾಡುತ್ತದೆ. ಆದುದರಿಂದ, ಯಾವುದೇ ರೀತಿಯ ಡ್ರಗ್ಸ್ ದೇಹದಿಂದ ಮಾತ್ರವಲ್ಲ ದೇಶದಿಂದಲೂ ಎಷ್ಟು ದೂರ ಇಡಲು ಸಾಧ್ಯವೋ ಅಷ್ಟು ದೂರ ಇಡಲು ನಮ್ಮ ಪಕ್ಷದ ಕಾರ್ಯಕರ್ತರು ಯುವ ಜನಾಂಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಕ್ತಿ ಮೀರಿ ಕೆಲಸ ಮಾಡುತ್ತಿವೆ. ನಮ್ಮ ಗೃಹ ಸಚಿವರು ಪೊಲೀಸ್ ಇಲಾಖೆಗೆ ಡ್ರಗ್ಸ್ ಜಾಲ ಮಟ್ಟ ಹಾಕಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕಲು ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News