×
Ad

ಸೆ.2ಕ್ಕೆ ನಿಗದಿಯಾಗಿದ್ದ ಕೆಂಪೇಗೌಡ ಜಯಂತಿ ಮುಂದೂಡಿಕೆ

Update: 2020-09-01 23:15 IST

ಬೆಂಗಳೂರು, ಸೆ.1: ಸೆ.2ರ ಬುಧವಾರದಂದು ನಿಗದಿಯಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯನ್ನು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಈ ಕುರಿತಂತೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಮಾಹಿತಿ ನೀಡಿದ್ದು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನರಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲೂ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಸೆ.2ರಂದು ನಿಗದಿಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮುಂದೂಡಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಆಚರಣೆಯ ದಿನಾಂಕ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News