ಸೆ.3ರಂದು ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

Update: 2020-09-02 11:51 GMT

ಬೆಂಗಳೂರು, ಸೆ. 2: ಇದೇ ತಿಂಗಳ 21ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನ ಸಿದ್ಧತೆ, ಡ್ರಗ್ಸ್ ಮಾಫಿಯಾ ಗೊಂದಲ ಹಾಗೂ ಡಿ.ಜೆ.ಹಳ್ಳಿ ಗಲಭೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖೆ ಪ್ರಗತಿ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಚರ್ಚೆಗೆ ನಾಳೆ(ಸೆ.3)ಬೆಳಗ್ಗೆ 11:30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ-2020, ಕರ್ನಾಟಕ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ-2020-25ಕ್ಕೆ, ಕರ್ನಾಟಕ ಮುನ್ಸಿಫಲ್ ಕಾರ್ಪೋರೇಷನ್(ಎರಡನೆ ತಿದ್ದುಪಡಿ) ವಿಧೇಯಕ-2020ಕ್ಕೆ ಅನುಮೋದನೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News