ಉಡುಪಿ: ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಅಂಬಾತನಯ ಮುದ್ರಾಡಿ
Update: 2020-09-02 18:19 IST
ಉಡುಪಿ, ಸೆ.2: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಂಬಾತನಯ ಮುದ್ರಾಡಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರುಗಳಾಗಿ ಕಾರ್ಕಳದ ಎಸ್‌ವಿಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮಿತ್ರಪ್ರಭಾ ಹೆಗಡೆ ಮತ್ತು ಶಿಕ್ಷಣ ತಜ್ಞ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಕಾರ್ಯದರ್ಶಿಯಾಗಿ ಉಡುಪಿ ಪಿಪಿಸಿಯ ಉಪನ್ಯಾಸಕಿ ಡಾ.ಪ್ರಜ್ಞಾ ಮಾರ್ಪಳ್ಳಿ, ಜೊತೆ ಕಾರ್ಯದರ್ಶಿಯಾಗಿ ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನ ಉಪಪ್ರಾಂಶುಪಾಲೆ ಡಾ.ವಿದ್ಯಾಲತಾ, ಖಜಾಂಚಿಯಾಗಿ ಉಡುಪಿ ಎಂಜಿಎಂ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಡಾ.ವಿಜಯಲಕ್ಷ್ಮೀ ಅವರನ್ನು ಆರಿಸಲಾಗಿದೆ ಎಂದು ಪರಿಷತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ನರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.