ದ.ಕ. ಜಿಲ್ಲೆಯಲ್ಲಿ ಬುಧವಾರ 414 ಮಂದಿಗೆ ಕೊರೋನ ಪಾಸಿಟಿವ್: 6 ಮಂದಿ ಮೃತ್ಯು

Update: 2020-09-02 13:36 GMT

ಮಂಗಳೂರು, ಸೆ.2: ದ.ಕ.ಜಿಲ್ಲೆಯಲ್ಲಿ ಬುಧವಾರ 414 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಮಂದಿ ಬಲಿಯಾಗಿದ್ದಾರೆ. ಬುಧವಾರ ಪಾಸಿಟಿವ್‌ಗೊಳಗಾದ 414 ಮಂದಿಯಲ್ಲಿ ಮಂಗಳೂರಿನ 222, ಬಂಟ್ವಾಳದ 64, ಪುತ್ತೂರಿನ 49, ಸುಳ್ಯದ 31, ಬೆಳ್ತಂಗಡಿಯ 28 ಮತ್ತು ಇತರ ಜಿಲ್ಲೆಯ 20 ಮಂದಿ ಸೇರಿದ್ದಾರೆ. ಬುಧವಾರ ವರದಿಯಾದ 414 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,479 ಮಂದಿಗೆ ಕೊರೋನ ಸೋಂಕು ತಗುಲಿದೆ.

ಮಂಗಳೂರು ತಾಲೂಕಿನ 4, ಬೆಳ್ತಂಗಡಿ 1 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ ಜಿಲ್ಲೆಯಲ್ಲಿ ಬುಧವಾರ 6 ಮಂದಿ ಕೊರೋನಕ್ಕೆ ಬಲಿಯಾಗಿದ್ದು, ಇದರೊಂದಿಗೆ ಈವರೆಗೆ ಬಲಿಯಾದವರ ಸಂಖ್ಯೆ 381ಕ್ಕೇರಿದೆ.

ಈವರೆಗೆ ದ.ಕ.ಜಿಲ್ಲೆಯ 99,414 ಮಂದಿಯ ಗಂಟಲಿನ ದ್ರವದ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 13,479 ಮಂದಿಯ ವರದಿ ಪಾಸಿಟಿವ್ ಮತ್ತು 85,935 ಮಂದಿಯ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಬುಧವಾರ 346 ಮಂದಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಅದರಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ 29, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 271 ಮತ್ತು ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 46 ಮಂದಿ ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 10,498ಕ್ಕೇರಿದೆ. ಜಿಲ್ಲೆಯಲ್ಲಿ 2600 ಸಕ್ರಿಯ ಪ್ರಕರಣಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News