ಮಳೆ ಹೆಚ್ಚಾಗುವ ಸಾಧ್ಯತೆ: ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

Update: 2020-09-02 13:59 GMT

ಮಡಿಕೇರಿ, ಸೆ.2: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೆ.4ರ ಬೆಳಗ್ಗೆ 8.30 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸರಾಸರಿ 115.6 ಮಿ.ಮೀ. ನಿಂದ 204.4 ಮಿ.ಮೀ. ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಳೆಯಿಂದ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಸಾರ್ವಜನಿಕರು ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 08272-221077, ವಾಟ್ಸ್ ಆ್ಯಪ್ ಸಂಖ್ಯೆ-8550001077 ಮೂಲಕ ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಅನೀಸ್ ಕಣ್ಮಣಿ ಜಾಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿ 107 ಇಂಚು ಮಳೆ
ಮಡಿಕೇರಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಮಳೆಯ ಪ್ರಮಾಣ ಹೆಚ್ಚಾಗಿದೆ. ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ 107 ಇಂಚು ಮಳೆಯಾಗಿದ್ದು, ಕಳೆದ ವರ್ಷ ಕೂಡ ಇದೇ ಅವಧಿಯಲ್ಲಿ ಇಷ್ಟೇ ಪ್ರಮಾಣದ ಮಳೆಯಾಗಿರುವುದು ವಿಶೇಷ. ವಿರಾಜಪೇಟೆ ತಾಲೂಕಿನಲ್ಲಿ 70 ಇಂಚು ಮಳೆಯಾಗಿದ್ದು, ಕಳೆದ ವರ್ಷ 83 ಇಂಚು ಮಳೆಯಾಗಿತ್ತು. ಸೋಮವಾರಪೇಟೆ ತಾಲೂಕಿನಲ್ಲಿ 50 ಇಂಚು ಮಳೆಯಾಗಿದ್ದು, ಕಳೆದ ವರ್ಷ 56 ಇಂಚು ಮಳೆಯಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News