ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ

Update: 2020-09-02 14:54 GMT
ಸಾಂದರ್ಭಿಕ ಚಿತ್ರ

 ಬುಲಂದಶಹರ್,ಸೆ.2: ಮೂವರು ವ್ಯಕ್ತಿಗಳಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ 14ರ ಹರೆಯದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬುಲಂದಶಹರ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಗ್ರಾಮದವರೇ ಆಗಿರುವ ಮೂವರು ಅದನ್ನು ವೀಡಿಯೊ ಚಿತ್ರೀಕರಿಸಿಕೊಂಡಿದ್ದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದರು ಎಂದು ಮೃತಳ ಕುಟುಂಬವು ಆರೋಪಿಸಿದೆ.

ಕುಟುಂಬದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಾಲಕಿ ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದು,ಈ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದಿದ್ದ ಪೊಲೀಸರು ಬಾಲಕಿಯ ಮನೆಗೆ ತೆರಳಿದ್ದರು. ಆದರೆ ಕುಟುಂಬವು ಸೋಮವಾರ ರಾತ್ರಿಯೇ ಬಾಲಕಿಯ ಅಂಂತ್ಯಸಂಸ್ಕಾರ ನೆರವೇರಿಸಿತ್ತು.

ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರದ ವಿರುದ್ಧ ದಾಳಿ ನಡೆಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, “ರಾಜ್ಯದಲ್ಲಿ ದಲಿತರನ್ನು ದಮನಿಸುವ ಘಟನೆಗಳು ಏಕೆ ಅಂತ್ಯಗೊಳ್ಳುತ್ತಿಲ್ಲ ಎನ್ನುವುದನ್ನು ಬಿಜೆಪಿ ಸರಕಾರವು ವಿವರಿಸುವುದೇ? ಸರಕಾರವು ಇಂತಹ ಘಟನೆಗಳ ಕಡೆಗಣನೆಯನ್ನು ನಿಲ್ಲಿಸಬೇಕು ಮತ್ತು ಕ್ರಮಗಳನ್ನು ತೆಗೆದುಕೊಂಡು ಜನತೆಗೆ ಉತ್ತರಿಸಬೇಕು” ಎಂದು ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News