×
Ad

ಉಡುಪಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾರಾಯಣಗುರು ಜಯಂತಿ

Update: 2020-09-02 20:53 IST

ಉಡುಪಿ, ಸೆ.2: ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅತ್ಯಂತ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News