ಎನ್‌ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2020-09-02 15:27 GMT

ಉಡುಪಿ, ಸೆ.2: ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ 2016, 17 ಮತ್ತು 2018ರ ಸಾಲಿನಲ್ಲಿ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಪಡೆಯಲು ನವೀಕರಣ ಮಾಡಿಕೊಳ್ಳಬೇಕಾಗಿದೆ. ಅದೇ ರೀತಿ 2019 ನವೆಂಬರ್‌ನಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಹೊಸದಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕಾಗಿದೆ.
ನೋಂದಣಿ ಮತ್ತು ನವೀಕರಣ ಮಾಡಿಕೊಳ್ಳಲು ಅ.31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ-www.NSP.2.0-ಗೆ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಎನ್‌ಎಂಎಂಎಸ್ ಅಧಿಕಾರಿ ಅಥವಾ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರ ನಾಯ್ಕೆ, ಉಪನ್ಯಾಸಕರು ಡಯಟ್ ಉಡುಪಿ ಮೊ.ನಂ: 9380241292 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News