ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಕೊರೋನ ಸೋಂಕು ದೃಢ

Update: 2020-09-02 16:32 GMT

ಬೆಂಗಳೂರು, ಸೆ. 2: ಬೆಳಗಾವಿ ಜಿಲ್ಲೆ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಕೊರೋನ ವೈರಸ್ ಸೋಂಕು ದೃಢವಾಗಿದೆ. ಆದರೆ, ಅವರಿಗೆ ಯಾವುದೇ ರೋಗದ ಲಕ್ಷಣವಿಲ್ಲ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ.

ಬುಧವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ನನಗೆ ಕೊರೋನ ಪಾಸಿಟಿವ್ ಬಂದಿದೆ. ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದು, ಗುಣಮುಖವಾಗುವವರೆಗೆ ಮನೆಯಿಂದಲೇ ಕ್ಷೇತ್ರದ ಕಾರ್ಯವನ್ನು ನಿರ್ವಹಿಸುತ್ತೇನೆ. ತಮ್ಮ ಸಂಪರ್ಕಕ್ಕೆ ಬಂದಿರುವವರು ತಕ್ಷಣ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಎಲ್ಲರು ಕೊರೋನ ಸೋಂಕಿನ ಬಗ್ಗೆ ಸೂಕ್ತ ಮುಂಜಾಗ್ರತೆ ಕ್ರಮ ವಹಿಸಬೇಕು'' ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News