ಬೆಂಗಳೂರಿನಲ್ಲಿಂದು 3,420 ಮಂದಿಗೆ ಕೊರೋನ ದೃಢ; 32 ಮಂದಿ ಮೃತ್ಯು

Update: 2020-09-02 16:34 GMT

ಬೆಂಗಳೂರು, ಸೆ.2: ನಗರದಲ್ಲಿ ಬುಧವಾರ 3,420 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 32 ಮಂದಿ ಸೋಂಕಿನಿಂದ ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 1,35,512 ಕೊರೋನ ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ 2,037 ಜನರು ಸೋಂಕಿಗೆ ಬಲಿಯಾಗಿದ್ದಾರೆ. 93,563 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 39,911 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,79,403 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಮಂಗಳವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 15,229 ಕಂಟೈನ್ಮೆಂಟ್ ಝೋನ್‍ಗಳಿವೆ. ಇದುವರೆಗೂ 38,231 ಕಂಟೈನ್ಮೆಂಟ್ ಝೋನ್‍ಗಳನ್ನು ಗುರುತಿಸಲಾಗಿದೆ. ನಗರದಲ್ಲಿ 3,45,536 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 4,41,719 ಜನರನ್ನು ಗುರುತಿಸಲಾಗಿದೆ.

ನಗರದಲ್ಲಿ ಇಲ್ಲಿಯವರೆಗೆ 8,92,219 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದೆ. ಅಲ್ಲದೇ, ಒಟ್ಟು 77,935 ಜನರಿಗೆ ಸ್ವಾಬ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.80ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.52ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.69.03ರಷ್ಟಿದೆ.

ಬೆಂಗಳೂರಿನಿಂದ ಕಾಶ್ಮೀರಕ್ಕೆ ಪ್ಲಾಸ್ಮಾ ರವಾನೆ

ನಗರದ ಎಚ್‍ಸಿಜಿ ಆಸ್ಪತ್ರೆಯ ಪ್ಲಾಸ್ಮಾ ಬ್ಯಾಂಕ್‍ನಿಂದ ಕಾಶ್ಮೀರದ ಶ್ರೀನಗರದ ಇಬ್ಬರು ಕೋವಿಡ್ ಸೋಂಕಿತರಿಗೆ ವಿಮಾನದ ಮೂಲಕ ಪ್ಲಾಸ್ಮಾವನ್ನು ಕಳುಹಿಸಿಕೊಡಲಾಗಿದೆ.

ಶ್ರೀನಗರದ ಸರಕಾರಿ ಆಸ್ಪತ್ರೆಯಲ್ಲಿ 61 ವರ್ಷ ವೃದ್ಧೆ ಮತ್ತು 63 ವರ್ಷದ ವೃದ್ಧ ಕೊರೋನದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆ ಪ್ಲಾಸ್ಮಾ ಚಿಕಿತ್ಸೆಗೆ ಅನಿವಾರ್ಯವಾಗಿತ್ತು. ಸೋಂಕಿತರ ಸ್ಥಳೀಯ ಸಂಬಂಧಿಗಳು ಎಚ್‍ಸಿಜಿ ಆಸ್ಪತ್ರೆಯ ಪ್ಲಾಸ್ಮಾ ಬ್ಯಾಂಕ್‍ನಲ್ಲಿ ಪ್ಲಾಸ್ಮಾ ನೆರವಿಗೆ ಮನವಿ ಮಾಡಿದ್ದರು. ಹೀಗಾಗಿ, ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇಂಡಿಗೋ ವಿಮಾನ ಸಿಬ್ಬಂದಿ ನೆರವು ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಎರಡು ಯುನಿಟ್ ಪ್ಲಾಸ್ಮಾವನ್ನು ಶ್ರೀನಗರಕ್ಕೆ ಕಳುಹಿಸಲಾಗಿದೆ ಎಂದು ಪ್ಲಾಸ್ಮಾ ಬ್ಯಾಂಕಿನ ಮುಖ್ಯಸ್ಥ ಡಾ.ವಿಶಾಲ್ ರಾವ್ ತಿಳಿಸಿದ್ದಾರೆ.

ಸದ್ಯ ಯಶಸ್ವಿಯಾಗಿ ಶ್ರೀನಗರಕ್ಕೆ ಪ್ಲಾಸ್ಮಾ ತಲುಪಿದ್ದು, ಸೋಂಕಿತರ ಚಿಕಿತ್ಸೆಗೆ ಬಳಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News