ರಾಷ್ಟ್ರೀಯ ಅಣುಕು ನ್ಯಾಯಾಲಯ ಸ್ಪರ್ಧೆ: ಬೆಂಗಳೂರು ವಿವಿ ಕಾನೂನು ಕಾಲೇಜಿಗೆ ಪ್ರಥಮ ಸ್ಥಾನ

Update: 2020-09-02 18:04 GMT

ಬೆಂಗಳೂರು, ಸೆ.2: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ರಾಷ್ಟ್ರೀಯ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 2ನೇ ಬೆಸ್ಟ್ ಮೆಮೋರಿಯಲ್ ಪ್ರಶಸ್ತಿ ಗಳಿಸಿಕೊಂಡಿದೆ.

ಸುರಾನಾ ಮತ್ತು ಸುರಾನಾ ಅಂತರ್ ರಾಷ್ಟ್ರೀಯ ಅಟಾರ್ನಿ ಹಾಗೂ ಎಂಎಸ್ ರಾಮಯ್ಯ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ದೇಶದ ಇತರೆ ಕಾನೂನು ಕಾಲೇಜುಗಳಿಂದ ಸುಮಾರು 50 ತಂಡಗಳು ಆಗಮಿಸಿದ್ದವು. ಇದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಸ್ಪರ್ಧೆಯಲ್ಲಿ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿನಿ ಶಿಲ್ಪಾ ಜಿ, ರಿತು ಈಶ್ವರ್ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು. ಪ್ರಶಸ್ತಿ ಪಡೆದ ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಡಾ.ಸುರೇಶ್ ನಾಡಗೌಡರ್ ಅಭಿನಂದನೆ ಸಲ್ಲಿಸಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News