×
Ad

ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಪ್ರತಿಭಾ ಪುರಸ್ಕಾರ

Update: 2020-09-03 19:36 IST

ಉಡುಪಿ, ಸೆ.3: ಈ ಬಾರಿಯ ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಉಡುಪಿ ಜಿಲ್ಲೆಯ ವಿದ್ಯಾರ್ಥಿ ಗಳಿಗೆ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ನಗದು ಸಹಿತ ಅಭಿನಂದಿಸಲಾಯಿತು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಅಭಿಜ್ಞಾ ಎಸ್. ರಾವ್, ನಾಲ್ಕನೇ ಸ್ಥಾನ ಪಡೆದ ಮೇಧಾ ಎನ್. ಭಟ್ ಹಾಗೂ ಎಸೆಸೆಲ್ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಭವ್ಯ ನಾಯಕ್ ಇವರನ್ನು ಈ ಸಂದರ್ಭ ದಲ್ಲಿ ಪ್ರಾಧ್ಯಾಪಕರಾದ ಅಶೋಕ್ ಕಾಮತ್, ಸಂಸ್ಥೆಯ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷ ಪ್ರೊ.ಶಂಕರ್ ಅಭಿನಂದಿಸಿದರು.

ನಗರದ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್. ಪಿ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಮರವಂತೆ ನಾಗರಾಜ್ ಹೆಬ್ಬಾರ್ ವಂದಿಸಿದರು.

ಈ ಸಂದರ್ಭದಲ್ಲಿ ಪ್ರಭಾವಿ. ಶೆಣೈ, ಮಾಜಿ ನಗರಸಭಾ ಸದಸ್ಯ ಶ್ಯಾಂಪ್ರಸಾದ್ ಕುಡ್ವ, ಪ್ರತಿಷ್ಠಾನದ ಉಪಾಧ್ಯಕ್ಷೆ ಸಂಧ್ಯಾ ಶೆಣೈ, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ವಿವೇಕಾನಂದ ಎನ್, ಪೂರ್ಣಿಮಾ ಜನಾರ್ಧನ್, ಸುಮಿತ್ರಾ ಕೆರೆಮಠ, ರಂಜಿತಾ ಶೇಟ್, ರಾಧಿಕಾ ಭಟ್, ನಂದಾ ಪೇಟ್ಕರ್, ಮಹೇಶ್ ಮಲ್ಪೆ, ಲಕ್ಷ್ಮೀ ಅಚಾರ್ಯ, ಭಾವನ ಕೆರೆಮಠ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News