×
Ad

ಕೊರೋನ ಮುಕ್ತಿಗೆ ಬಿಜೆಪಿ ಸಾಮೂಹಿಕ ಪ್ರಾರ್ಥನೆ

Update: 2020-09-03 19:38 IST

ಉಡುಪಿ, ಸೆ.3:ವಿಶ್ವದಾದ್ಯಂತ ಕೋವಿಡ್-19ರ ಮುಕ್ತಿಗೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರ ಆರೋಗ್ಯ ವೃದ್ಧಿಗೆ ಪ್ರಾರ್ಥಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಉಡುಪಿ ಶ್ರೀಕೃಷ್ಣ ಮಠ, ಶ್ರೀಅನಂತೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News