ಹೃದಯಾಘಾತ: ಬಂದರು ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಿಧನ
Update: 2020-09-03 20:12 IST
ಮಂಗಳೂರು, ಸೆ.3: ನಗರದ ಬಂದರು ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದಿನೇಶ್ (35) ಎಂಬವರು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಮೂಲತಃ ಹಾಸನದ ದಿನೇಶ್ ಪ್ರಸ್ತುತ ನಗರದ ಕೊಡಿಯಾಲ್‌ಗುತ್ತು ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದರು. ಗುರುವಾರ ಬೆಳಗ್ಗೆ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕದ್ರಿ ಮತ್ತು ವಿಮಾನ ನಿಲ್ದಾಣದ ಇಮಿಗ್ರೇಷನ್ ಕಚೇರಿಯಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದ ದಿನೇಶ್ ದಿನೇಶ್ ಕಳೆದೊಂದು ವರ್ಷದಿಂದ ಬಂದರು ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.