ಆಕಸ್ಮಿಕ ಗುಂಡೇಟು: ಆರ್.ಪಿ.ಶರ್ಮಾ ಆರೋಗ್ಯ ಸ್ಥಿರ
Update: 2020-09-03 20:48 IST
ಬೆಂಗಳೂರು, ಸೆ.3: ಪೊಲೀಸ್ ಗೃಹ ಮಂಡಳಿ ನಿರ್ದೇಶಕ ಆರ್.ಪಿ.ಶರ್ಮಾ ಅವರಿಗೆ ಆಕಸ್ಮಿಕವಾಗಿ ಗುಂಡೇಟು ತಗಲಿದ ಘಟನೆ ಸಂಬಂಧ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರನ್ನು ಗುರುವಾರ ಹಿರಿಯ ಐಪಿಎಸ್ ಅಧಿಕಾರಿಗಳು, ಅವರ ಆಪ್ತ ಸ್ನೇಹಿತರು ಭೇಟಿ ಮಾಡಿ ಮಾಹಿತಿ ಪಡೆದರು.
ಬುಧವಾರ ಸಂಜೆ ಸುಮಾರಿಗೆ ಆಕಸ್ಮಿಕವಾಗಿ ಗುಂಡು ತಗಲಿದ್ದು, ಬಳಿಕ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಹೃದಯ ಮತ್ತು ಶ್ವಾಸಕೋಶಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.