×
Ad

ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಬದ್ಧ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

Update: 2020-09-03 21:01 IST

ಬೆಂಗಳೂರು, ಸೆ.3: ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಕಂಕಣ ಬದ್ಧರಾಗಬೇಕಿದೆ. ನಮ್ಮ ರಾಜ್ಯದ ಯುವ ಜನಾಂಗ ನಮ್ಮ ಕಣ್ಣ ಮುಂದೆ ಇದೆ. ಈ ಅಭಿಯಾನದ ಬಗ್ಗೆ ನಮ್ಮ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಗ್ರಾಮಗಳಿಗೂ ನಮ್ಮ ಪಕ್ಷದ ಕಾರ್ಯಕರ್ತರು ಜಾಗೃತಿ ಮೂಡಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಸಮಾಲೋಚನೆ ನಡೆಸಿದ್ದೇನೆ. ಡ್ರಗ್ಸ್ ಜಾಲದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಅವರನ್ನು ಹೆಡೆಮುರಿ ಕಟ್ಟಲು ಸರಕಾರ ಬದ್ಧ ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News