ವಿಶ್ವ ಆರೋಗ್ಯ ಸಂಸ್ಥೆಗೆ ಈ ಬಾರಿಯೂ ಪಾಲು ಕೊಡುವುದಿಲ್ಲ: ಅಮೆರಿಕ

Update: 2020-09-03 16:29 GMT

ವಾಶಿಂಗ್ಟನ್, ಸೆ. 3: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಗೆ ಅಮೆರಿಕ ನೀಡಬೇಕಾಗಿರುವ ಸುಮಾರು 80 ಮಿಲಿಯ ಡಾಲರ್ (ಸುಮಾರು 586 ಕೋಟಿ ರೂಪಾಯಿ) ನಿಧಿಯನ್ನು ಕೊಡುವುದಿಲ್ಲ ಎಂದು ಅಮೆರಿಕದ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ. ಬದಲಿಗೆ, ಈ ಹಣವನ್ನು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಗೆ ಅಮೆರಿಕ ಕೊಡಬೇಕಾಗಿರುವ ಹಣವನ್ನು ಪಾವತಿಸಲು ಬಳಸುವುದಾಗಿ ಅವರು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ಕಚೇರಿಯು ಸ್ವಿಟ್ಸರ್‌ಲ್ಯಾಂಡ್ ದೇಶದ ಜಿನೀವದಲ್ಲಿದೆ.

 ಅಮೆರಿಕವು 2021 ಜುಲೈ 6ರಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರಲು ಉದ್ದೇಶಿಸಿದೆ. ಕೊರೋನ ವೈರಸ್ ಸಾಂಕ್ರಾಮಿಕದ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಕೈಗೊಂಬೆಯಂತೆ ವರ್ತಿಸಿದೆ ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News