ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಆರೋಪ: ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ
Update: 2020-09-04 12:43 IST
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಆಕೆಯನ್ನು ವಿಚಾರಣೆಗೊಳಪಡಿಸಿದ್ದಾರೆ.
ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ರಾಗಿಣಿಯನ್ನು ಕರೆತಂದಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಅಧಿಕಾರಿಗಳನ್ನು ಒಳಗೊಂಡಂತೆ ವಿಚಾರಣೆ ಮಾಡುತ್ತಿದ್ದಾರೆ. ಈಗಾಗಲೇ ಈಕೆಯ ಆಪ್ತ ಎನ್ನಲಾದ ರವಿಶಂಕರ್ ನನ್ನು ಬಂಧಿಸಿ, ಸಿಸಿಬಿ ಪೊಲೀಸರು ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಈತನ ಪ್ರಾಥಮಿಕ ಮಾಹಿತಿಯಂತೆ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ.