ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
Update: 2020-09-04 21:11 IST
ಉಡುಪಿ, ಸೆ.4: ಪ್ರಸ್ತುತ ಸಾಲಿನ ಸ್ವಯಂ ಉದ್ಯೋಗ, ಐರಾವತ, ಪ್ರೇರಣಾ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಹ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು -www.ksskdc.kar.nic.in - ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಇವರನ್ನು ಸಂಪರ್ಕಿಬಹುದು ಎಂದು ಪ್ರಕಟಣೆ ತಿಳಿಸಿದೆ.